HomeIndiaBIG NEWS : ಜಾರ್ಖಂಡ್'ನ 14ನೇ ಸಿಎಂ ಆಗಿ 'ಹೇಮಂತ್ ಸೊರೆನ್' ಇಂದು ಪ್ರಮಾಣ ವಚನ...

BIG NEWS : ಜಾರ್ಖಂಡ್’ನ 14ನೇ ಸಿಎಂ ಆಗಿ ‘ಹೇಮಂತ್ ಸೊರೆನ್’ ಇಂದು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಇಂದು (ಗುರುವಾರ) ಜಾರ್ಖಂಡ್ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜಾರ್ಖಂಡ್ ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಇಂದು ಸಂಜೆ 4 ಗಂಟೆಗೆ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು ಹೇಮಂತ್ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಜಾರ್ಖಂಡ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್ ಅವರು ಹೇಮಂತ್ ಸೊರೆನ್ ಅವರು ಏಕಾಂಗಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಮತ್ತು ವಿಧಾನಸಭೆಯಲ್ಲಿ ವಿಶ್ವಾಸ ಮತದ ನಂತರ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಲಿದ್ದಾರೆ ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್,ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ.ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ,ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೇರಿದಂತೆ ಹಲವರು ಹಾಜರಿರುವ ಸಾಧ್ಯತೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular