alex Certify BREAKING : ಬೆಂಗಳೂರಿನಲ್ಲಿ ‘ದ್ವಿತೀಯ PUC’ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ, 9 ಮಂದಿ ವಿರುದ್ಧ ‘FIR’ ದಾಖಲು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ‘ದ್ವಿತೀಯ PUC’ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ, 9 ಮಂದಿ ವಿರುದ್ಧ ‘FIR’ ದಾಖಲು.!

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಘಟನೆ ನಡೆದಿದೆ.ಟ್ಯೂಶನ್ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವಿದ್ಯಾರ್ಥಿ ಸೈಯದ್ ಇಶಾನ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಕಳೆದ ವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಸಂಬಂಧ ಪೊಲೀಸರು 9 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಖಾದೀರ್, , ನವಾಜ್, ಫಾರಜ್, ಮಸ್ತಾನ್ ಸೇರಿ 9 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...