ರಾಮನಗರ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಹುಟ್ಟಿದ ಮಗುವನ್ನು ಟಾಯ್ಲೆಟ್ ನಲ್ಲಿ ಹಾಕಿ ಫ್ಲಶ್ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ.
ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಟಾಯ್ಲೆಟ್ ಪರಿಶೀಲನೆ ವೇಳೆ ಗಂಡು ಮಗುವಿನ ಶವ ಪತ್ತೆಯಾಗಿದೆ.ತಾಯಿಯೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.
2 ದಿನದ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದ್ದು, ಹಾರೋಹಳ್ಳಿ ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಮಗುವಿನ ತಾಯಿ ಯಾರು..ಈ ಕೃತ್ಯ ಎಸಗಿದ್ದವರು ಯಾರು ಎಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ.ಟಾಯ್ಲೆಟ್ ನ ಗುಂಡಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಆಸ್ಪತ್ರೆ ಸಿಬ್ಬಂದಿಗಳ ಹೌಹಾರಿದ್ದಾರೆ. ಇಡೀ ಮನುಕುಲವೇ ಬೆಚ್ಚಿ ಬೀಳುವ ಘಟನೆ ರಾಮನಗರದಲ್ಲಿ ವರದಿಯಾಗಿದೆ.