HomeKarnatakaBMTC ಬಸ್ ನಲ್ಲಿ ಟಿಕೆಟ್ ರಹಿತ ಪ್ರಯಾಣ: 19 ಲಕ್ಷ ರೂ ದಂಡ ವಸೂಲಿ

BMTC ಬಸ್ ನಲ್ಲಿ ಟಿಕೆಟ್ ರಹಿತ ಪ್ರಯಾಣ: 19 ಲಕ್ಷ ರೂ ದಂಡ ವಸೂಲಿ

ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ನಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ್ದಕ್ಕೆ ಪ್ರಯಾಣಿಕರಿಗೆ ದಂಡ ವಿಧಿಸಲಾಗಿದ್ದು, ಮೂರು ತಿಂಗಳಲ್ಲಿ 19 ಲಕ್ಷ ವಸೂಲಿ ಮಾಡಲಾಗಿದೆ.

ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಟಿಕೆಟ್ ರಹಿತ ಪ್ರಯಾಣಕ್ಕೆ ಒಟ್ಟು 8,891 ಪ್ರಕರಣಗಳು ಪತ್ತೆಯಾಗಿವೆ. 57,219 ಟ್ರಿಪ್ ಗಳ ತಪಾಸಣೆಯಲ್ಲಿ 8,891 ಪ್ರಯಾಣಿಕರಿಂದ ದಂಡ ವಸೂಲಿ ಮಾಡಲಾಗಿದೆ.

ಅಷ್ಟೇ ಅಲ್ಲ 5,268 ಪ್ರಕರಣಗಳಲ್ಲಿ ನಿರ್ವಾಹಕರ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಿಳೆಯರ ಮೀಸಲು ಸೀಟ್ ನಲ್ಲಿ ಕುಳಿತು ಪ್ರಯಾಣಿಸಿದವರಿಗೂ ದಂಡ ವಿಧಿಸಲಾಗಿದೆ. ಒಟ್ಟು ಪ್ರಕರಣಗಳಲ್ಲಿ 19,13,830 ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular