HomeKarnatakaBIG NEWS: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

BIG NEWS: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್  ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ.

ಇಂದು ನಡೆದ ಜಾಮೀನು ಅರ್ಜಿ ವಿಚಾರಣೆ ವೇಳೆ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಸುದೀರ್ಘ ವಾದ ಮಂಡನೆ ಮುಂದುವರೆಸಿದರು. ಈ ವೇಳೆ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ, ಅನಾರೋಗ್ಯ ಕಾರಣಕ್ಕೆ ಮಧ್ಯಂತರ ಜಾಮೀನು ಪಡೆದಿದ್ದ ದರ್ಶನ್ ಆರೋಗ್ಯ ಸ್ಥಿತಿ ಹೇಗಿದೆ? ವೈದ್ಯರು ತುರ್ತು ಸರ್ಜರಿಗೆ ಸೂಚಿಸಿದ್ದರೂ ಸರ್ಜರಿ ಮಾಡಿಸದೇ ವಿಳಂಬ ಮಾಡುತ್ತಿರುವುದು ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ದರ್ಶನ್ ಪರ ವಕೀಲ ನಾಗೇಶ್, ದರ್ಶನ್ ಬಿಪಿಯಲ್ಲಿ ವ್ಯತ್ಯಾಸವಾಗುತ್ತಿರುವ ಕಾರಣಕ್ಕೆ ಸರ್ಜರಿ ಇನ್ನೂ ಆಗಿಲ್ಲ. ಈ ಬಗ್ಗೆ ವೈದ್ಯರು ತೀರ್ಮಾನಿಸುತ್ತಾರೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ದರ್ಶನ್ ಮ್ಯಾನೇಜರ್ ನಾಗರಾಜ್ ಪರ ವಕೀಲರಿಂದಲೂ ವಾದ ಮಂಡನೆ ಮಾಡಲಾಗಿದೆ. ಸುದೀರ್ಘ ವಾದ ಆಲಿಸಿದ ನ್ಯಾಯಾಲಯ ನ.29 ನಾಳೆಗೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular