ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಜ್ಞರ ಸಮಿತಿ ರಚನೆ ಮಾಡಿದೆ.
ಡಾ.ಸವಿತಾ, ಡಾ.ಭಾಸ್ಕರ್, ಡಾ.ಹರ್ಷ ಅವರನ್ನೊಳಗೊಂದ ತಜ್ಞರ ಸಮಿತಿಯನ್ನು ರಚನೆ ಮಾಡಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ತನಿಖೆ ನಡೆಸುವಂತೆ ಸೂಚಿಸಲಾಗಿದೆ. ಶೀಘ್ರವೇ ತನಿಖೆ ನಡೆಸಿ ವರದಿ ನೀಡುವಂತೆ ಸರ್ಕಾರ ಆದೇಶ ನೀಡಿದೆ.
ಬಳ್ಳಾರಿ ಬಿಮ್ಸ್ ಆಸ್ಪತ್ರೆಗೆ ಹೆರಿಗೆಗೆಂದು ದಾಖಲಾಗಿದ್ದ ಐವರು ಮಹಿಳೆಯರು, ಹೆರಿಗೆ ಬಳಿಕ ಸಾವನ್ನಪ್ಪಿದ್ದರು. ವೈದ್ಯರ ನಿರ್ಲಕ್ಷ, ಅವ್ಯವಸ್ಥೆಯೇ ಬಾಣಂತಿಯರ ಸಾವಿಗೆ ಕಾರಣ ಎಂದು ಕುಟುಂಬದವರು ಆಆರೋಪಿಸಿದ್ದರು. ಬಣಂತಿಯರ ಸರಣಿ ಸಾವಿನಿಂದ ಜಿಲ್ಲೆಯ ಜನರು ಆತಂಕಕ್ಕೀಡಾಗಿದ್ದು, ಎಚ್ಚೆತ್ತ ರಾಜ್ಯ ಸರ್ಕಾರ ಪ್ರಕರನದ ತನಿಖೆಗೆ ತಜ್ಞನರ ತಂದ ರಚನೆ ಮಾಡಿದೆ.