ಬೆಂಗಳೂರು: ಬಿಬಿಎಂಪಿಯ ಎಲ್ಲಾ ವಾರ್ಡ್ಗಳಲ್ಲಿರುವ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸುವ ಸಲುವಾಗಿ ಪ್ರತಿ ವಾರ್ಡ್ಗೆ ಒಬ್ಬ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಸುತ್ತೋಲೆ ಹೊರಡಿಸಿದ್ದಾರೆ.
ಪ್ರತಿ ವಾರ್ಡ್ಗೆ ನಿಯೋಜಿಸಿರುವ ನೋಡಲ್ ಅಧಿಕಾರಿಯ ಹೆಸರು, ವಾರ್ಡ್ ಹೆಸರು, ಹುದ್ದೆ ಹಾಗೂ ದೂರವಾಣಿ ಸಂಖ್ಯೆಯುಳ್ಳ ಪಟ್ಟಿಯು ಪಾಲಿಕೆಯ https://bbmp.gov.in/home ವೆಬ್ಸೈಟ್ ನಲ್ಲಿ ಲಭ್ಯವಿದೆ.