ನವದೆಹಲಿ: ಚಿನ್ಮೋಯ್ ಕೃಷ್ಣ ದಾಸ್ ಬಂಧನದ ಕುರಿತು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಪ್ರತಿಕ್ರಿಯೆ ನೀಡಿದ್ದು, ಅವರನ್ನು ಅನ್ಯಾಯವಾಗಿ ಬಂಧಿಸಲಾಗಿದೆ, ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ವಾರದ ಆರಂಭದಲ್ಲಿ ಬಂಧನಕ್ಕೊಳಗಾಗಿದ್ದ ಹಿಂದೂ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಅವರನ್ನು ಬಂಧಿಸಲಾಗಿದ್ದು, ಅವರನ್ನು ಬೆಂಬಲಿಸಿ ಶೇಖ್ ಹಸೀನಾ ಅವರು ಗುರುವಾರ ಹೇಳಿಕೆ ನೀಡಿದ್ದಾರೆ.
ದೇಶದ್ರೋಹದ ಆರೋಪದ ಮೇಲೆ ಚಟ್ಟೋಗ್ರಾಮ್ ನ್ಯಾಯಾಲಯದಿಂದ ಜೈಲಿಗೆ ಕಳುಹಿಸಲಾಗಿದೆ. ಇದು ಹಿಂದೂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಬಾಂಗ್ಲಾದೇಶ ಸರ್ಕಾರವನ್ನು ಹಸೀನಾ ಒತ್ತಾಯಿಸಿದ್ದಾರೆ.
ಸನಾತನ ಧಾರ್ಮಿಕ ಸಮುದಾಯದ ಉನ್ನತ ನಾಯಕನನ್ನು ಅನ್ಯಾಯವಾಗಿ ಬಂಧಿಸಲಾಗಿದೆ, ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು, ಚಿತ್ತಗಾಂಗ್ನಲ್ಲಿ ದೇವಾಲಯವನ್ನು ಸುಡಲಾಗಿದೆ, ಈ ಹಿಂದೆ ಅಹ್ಮದೀಯ ಸಮುದಾಯದ ಮಸೀದಿಗಳು, ದೇವಾಲಯಗಳು, ಚರ್ಚ್ಗಳು, ಮಠಗಳು ಮತ್ತು ಮನೆಗಳ ಮೇಲೆ ದಾಳಿ, ಧ್ವಂಸ ಮತ್ತು ಲೂಟಿ ಮತ್ತು ಹತ್ಯೆಯ ನಂತರ ಎಲ್ಲಾ ಸಮುದಾಯಗಳ ಜನರ ಜೀವನ ಮತ್ತು ಆಸ್ತಿಯ ಧಾರ್ಮಿಕ ಸ್ವಾತಂತ್ರ್ಯವನ್ನು ಖಾತ್ರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಅಸಂಖ್ಯಾತ ಅವಾಮಿ ಲೀಗ್ ನಾಯಕರು ಮತ್ತು ಕಾರ್ಯಕರ್ತರು, ವಿದ್ಯಾರ್ಥಿಗಳು, ಕಾನೂನು ಮತ್ತು ಸುವ್ಯವಸ್ಥೆ ಪಡೆಗಳ ಸದಸ್ಯರ ಮೇಲೆ ಹಲ್ಲೆಗಳು ಮತ್ತು ಬಂಧನಗಳ ಮೂಲಕ ಕಿರುಕುಳ ನೀಡಲಾಗುತ್ತಿದೆ. ನಾನು ಈ ಅರಾಜಕತಾವಾದಿ ಚಟುವಟಿಕೆಗಳನ್ನು ಬಲವಾಗಿ ಖಂಡಿಸುತ್ತೇನೆ ಮತ್ತು ಪ್ರತಿಭಟಿಸುತ್ತೇನೆ ಎಂದು ಹಸೀನಾ ತಿಳಿಸಿದ್ದಾರೆ.
আওয়ামী লীগ সভানেত্রী বঙ্গবন্ধুকন্যা শেখ হাসিনার বিবৃতিঃ
চট্টগ্রামে একজন আইনজীবীকে হত্যা করা হয়েছে, এই হত্যার তীব্র প্রতিবাদ জানাচ্ছি। এই হত্যাকাণ্ডের সঙ্গে যারা জড়িত তাদেরকে খুঁজে বের করে দ্রুত শাস্তি দিতে হবে। এই ঘটনার মধ্য দিয়ে চরমভাবে মানবাধিকার লঙ্ঘিত হয়েছে। একজন… pic.twitter.com/b7yjlyj9Et
— Awami League (@albd1971) November 28, 2024