alex Certify BIG NEWS: ಇನ್ನು ನಿಷ್ಕ್ರಿಯ ಕೊಳವೆ ಬಾವಿ ಮುಚ್ಚದಿದ್ದರೆ ಕಠಿಣ ಕ್ರಮ: ಶಿಕ್ಷೆ, ದಂಡ ವಿಧಿಸುವ ವಿಧೇಯಕ ಮಂಡನೆಗೆ ಸಂಪುಟ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇನ್ನು ನಿಷ್ಕ್ರಿಯ ಕೊಳವೆ ಬಾವಿ ಮುಚ್ಚದಿದ್ದರೆ ಕಠಿಣ ಕ್ರಮ: ಶಿಕ್ಷೆ, ದಂಡ ವಿಧಿಸುವ ವಿಧೇಯಕ ಮಂಡನೆಗೆ ಸಂಪುಟ ನಿರ್ಧಾರ

ಬೆಂಗಳೂರು: ಕೊಳವೆಬಾವಿ ನಿಷ್ಕ್ರಿಯ ಆಗಿದ್ದರೆ ಮುಚ್ಚುವುದು ಕಡ್ಡಾಯವಾಗಿದ್ದು, ಇಲ್ಲದಿದ್ದರೆ ಶಿಕ್ಷೆ ಹಾಗೂ ದಂಡ ವಿಧಿಸುವ ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಕೊಳವೆ ಬಾವಿಗಳಲ್ಲಿ ಮಕ್ಕಳು ಅಪಘಾತಕ್ಕೀಡಾಗುವುದನ್ನು ತಪ್ಪಿಸುವ ಸಲುವಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಮುಂಬರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲು ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.

ಶಿಕ್ಷೆಯ ಪ್ರಮಾಣ ಹೀಗಿದೆ:

ಕೊಳವೆ ಬಾವಿ ದುರಂತ ಸಂಭವಿಸಿದಲ್ಲಿ ಅದರ ಮಾಲೀಕರಿಗೆ ಅಥವಾ ತಪ್ಪಿತಸ್ಥರಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಲಾಗುವುದು.

ಕೊಳವೆ ಬಾವಿಗಳ ಬಳಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ವಿಫಲರಾದರೆ 5 ಸಾವಿರ ರೂ. ದಂಡ ಮತ್ತು 3 ತಿಂಗಳ ಜೈಲು ಶಿಕ್ಷೆಗೆ ಅವಕಾಶ.

ಕೊಳವೆ ಬಾವಿ ಕೊರೆಯುವ ಭೂ ಮಾಲೀಕರು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸಿದ್ದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡವಿಧಿಸಲು ಅವಕಾಶ ಇರಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...