ಬೆಂಗಳೂರು : ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಕುರಿತಾದ ಸಂಪೂರ್ಣ ವರದಿ ಇಲ್ಲಿದೆ.
ಬೆಂಗಳೂರಿನ ಹೆಬ್ಬಾಳದಲ್ಲಿ ₹200 ಕೋಟಿ ವೆಚ್ಚದಲ್ಲಿ ಸಾವಯವ ಮತ್ತು ಸಿರಿಧಾನ್ಯ ಹಬ್ ಅನ್ನು ಸ್ಥಾಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಆಡಳಿತಾತ್ಮಕ ಅನುಮೋದನೆ ನೀಡಿದೆ.
₹108.36 ಕೋಟಿ ವೆಚ್ಚದಲ್ಲಿ 254 ನಗರ ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಾಗೂ 39 ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್ಗಳ ಸ್ಥಾಪನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
ಕೊಳವೆ ಬಾವಿಗಳಲ್ಲಿ ಮಕ್ಕಳು ಅಪಘಾತಕ್ಕೀಡಾಗುವುದನ್ನು ತಪ್ಪಿಸುವ ಸಲುವಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಮುಂಬರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
ಶಿಕ್ಷೆಯ ಪ್ರಮಾಣ ಹೀಗಿದೆ
ಕೊಳವೆ ಬಾವಿ ದುರಂತ ಸಂಭವಿಸಿದಲ್ಲಿ ಅದರ ಮಾಲೀಕರಿಗೆ ಅಥವಾ ತಪ್ಪಿತಸ್ಥರಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಲಾಗುವುದು.ಕೊಳವೆ ಬಾವಿಗಳ ಬಳಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ವಿಫಲರಾದರೆ ₹5 ಸಾವಿರ ದಂಡ ಮತ್ತು 3 ತಿಂಗಳ ಜೈಲು ಶಿಕ್ಷೆಗೆ ಅವಕಾಶಕೊಳವೆ ಬಾವಿ ಕೊರೆಯುವ ಭೂ ಮಾಲೀಕರು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸಿದ್ದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಮತ್ತು ₹20 ಸಾವಿರ ದಂಡವಿಧಿಸಲು ಅವಕಾಶ ಇರಲಿದೆ.
ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡ ವಿಧೇಯಕಗಳು ಹೀಗಿವೆ
ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ – 2024
• ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ ಹಾಗೂ ನಿರ್ವಹಣಾ ನಿಯಂತ್ರಣ) (ತಿದ್ದುಪಡಿ) ವಿಧೇಯಕ – 2024
• ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ – 2024
• ಚಾಣಕ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ – 2024
₹108.36 ಕೋಟಿ ವೆಚ್ಚದಲ್ಲಿ 254 ನಗರ ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಾಗೂ 39 ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್ಗಳ ಸ್ಥಾಪನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.#CabinetDecisions @CMofKarnataka @siddaramaiah pic.twitter.com/Mx6dZJ2Ywv
— DIPR Karnataka (@KarnatakaVarthe) November 28, 2024
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ – 2024
• ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ – 2024
• ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (2ನೇ ತಿದ್ದುಪಡಿ) ವಿಧೇಯಕ – 2024
• ಕರ್ನಾಟಕ ಪ್ರವಾಸೋದ್ಯಮ ರೋಪ್ವೇಸ್ ವಿಧೇಯಕ – 2024
• ಅಸಂಘಟಿಕ ಕಾರ್ಮಿಕ ಸಾಮಾಜಿಕ ಭದ್ರತೆ (ಕರ್ನಾಟಕ) (ತಿದ್ದುಪಡಿ) ನಿಯಮಗಳು – 2024
ಬೆಂಗಳೂರಿನ ಹೆಬ್ಬಾಳದಲ್ಲಿ ₹200 ಕೋಟಿ ವೆಚ್ಚದಲ್ಲಿ ಸಾವಯವ ಮತ್ತು ಸಿರಿಧಾನ್ಯ ಹಬ್ ಅನ್ನು ಸ್ಥಾಪಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಆಡಳಿತಾತ್ಮಕ ಅನುಮೋದನೆ ನೀಡಿದೆ #CabinetDecisions pic.twitter.com/caregk6ubW
— DIPR Karnataka (@KarnatakaVarthe) November 28, 2024