HomeKarnatakaBIG NEWS : ರಾಜ್ಯದ 'SSLC' ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಈ ವರ್ಷದ 'ಪ್ರಶ್ನೆಪತ್ರಿಕೆ...

BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಈ ವರ್ಷದ ‘ಪ್ರಶ್ನೆಪತ್ರಿಕೆ ವಿನ್ಯಾಸ’ದಲ್ಲಿ ಯಾವುದೇ ಬದಲಾವಣೆ ಇಲ್ಲ.!

ಬೆಂಗಳೂರು : 2024 – 25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ. ಆದರೆ 2024 – 25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಈ ಮೂಲಕ ಸ್ಪಷ್ಟೀಕರಿಸುತ್ತಿದ್ದೇವೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸದರಿ ಸಮಿತಿ ನೀಡುವ ವರದಿಯಂತೆ ಕ್ರಮವಹಿಸಲಾಗುವುದು. ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆಯಿಲ್ಲದೆ, ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular