HomeKarnatakaBIG NEWS : 87ನೇ 'ಕನ್ನಡ ಸಾಹಿತ್ಯ ಸಮ್ಮೇಳನ'ಕ್ಕೆ ರಾಜ್ಯ ಸರ್ಕಾರಿ ನೌಕರರ ಒಂದು...

BIG NEWS : 87ನೇ ‘ಕನ್ನಡ ಸಾಹಿತ್ಯ ಸಮ್ಮೇಳನ’ಕ್ಕೆ ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನ ಕಡಿತ

ಮಂಡ್ಯ : 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನ ಕಡಿತಗೊಳಿಸಲುಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಮಂಡ್ಯ ಜಿಲ್ಲೆಯಲ್ಲಿ ಸರ್ಕಾರಿ ನೌಕರರ ಸಮುದಾಯ ಭವನವನ್ನು ನಿರ್ಮಿಸುವ ಉದ್ದೇಶಕ್ಕಾಗಿ ಮಂಡ್ಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಸ್ತ ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನವನ್ನು 2024ರ ನವೆಂಬರ್ ತಿಂಗಳ ವೇತನದಲ್ಲಿ ಕಟಾಯಿಸಲು ಹಾಗೂ ಕಟಾಯಿಸಲಾದ ಒಟ್ಟಾರೆ ಕ್ರೋಢೀಕೃತ ಮೊತ್ತವನ್ನು ಜಿಲ್ಲಾಧಿಕಾರಿ, ಮಂಡ್ಯ ಜಿಲ್ಲೆ ಇವರಿಗೆ ಸಂದಾಯ ಮಾಡಲು ಈ ಕೆಳಗೆ ಸೂಚಿಸಿರುವ ಷರತ್ತು ಮತ್ತು ನಿಬಂಧನೆಗೊಳಪಟ್ಟು ಸರ್ಕಾರವು ಮಂಜೂರಾತಿ ನೀಡಿದೆ.

1) ನೌಕರರ ಒಂದು ದಿನದ ವೇತನ ವಂತಿಗೆಯನ್ನು 2024ರ ನವೆಂಬರ್ ತಿಂಗಳ ವೇತನದ ಬಿಲ್ಲಿನಿಂದ ಕಟಾವುಗೊಳಿಸುವ ಮೂಲಕ ವಸೂಲಿ ಮಾಡಲು ಆಯಾ ಕಛೇರಿ ಮುಖ್ಯಾಧಿಕಾರಿಗಳು (DDO) ಮತ್ತು ಖಜಾನಾಧಿಕಾರಿಗಳು ಅಧಿಕಾರ ಪಡೆದಿರುತ್ತಾರೆ.

2) ನವೆಂಬರ್ 2024ರ ತಿಂಗಳ ವೇತನದಲ್ಲಿ ಒಂದು ದಿನದ ವೇತನವನ್ನು ವಂತಿಗೆಯಾಗಿ ಕೊಡಲಿಚ್ಚಿಸದ ನೌಕರರು ತಮ್ಮ ಅಸಮ್ಮತಿಯನ್ನು ಸಂಬಂಧಪಟ್ಟ ಬಟವಾಡೆ ಅಧಿಕಾರಿಗಳಿಗೆ 2ನೇ ಡಿಸೆಂಬರ್ 2024ರೊಳಗೆ ಲಿಖಿತ ಮೂಲಕ ಸಲ್ಲಿಸತಕ್ಕದ್ದು ಮತ್ತು ಅಂತಹ ನೌಕರರ ಒಂದು ದಿನದ ವೇತನವನ್ನು 2024ರ ನವೆಂಬರ್ ತಿಂಗಳಿನ ವೇತನ ಬಿಲ್ಲಿನಲ್ಲಿ ಕಟಾವು ಮಾಡತಕ್ಕದ್ದಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

3) ವಂತಿಗೆ ರೂಪದಲ್ಲಿ ಕಟಾಯಿಸಲಾದ ಒಂದು ದಿನದ ವೇತನದ ಮೊತ್ತದ ಬಗ್ಗೆ ಸಂಬಂಧಿಸಿದ ನೌಕರರ ವೇತನ ಬಿಲ್ಲಿನಲ್ಲಿ “87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಂತಿಗೆ” ಎಂದು ಪ್ರತ್ಯೇಕ ಅಂಕಣದಲ್ಲಿ ನಮೂದಿಸತಕ್ಕದ್ದು ಮತ್ತು ಸಮಗ್ರ ವೇತನ ಬಿಲ್ಲಿನಲ್ಲಿ ಕಡಿತಗೊಳಿಸಿದ ಒಟ್ಟು ಮೊತ್ತವನ್ನು ವೇತನ ಬಿಲ್ಲಿನ ಮುಖ ಪುಟದಲ್ಲಿ “87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಂತಿಗೆ’ ಎಂಬುದಾಗಿ ಸ್ಪಷ್ಟವಾಗಿ ನಮೂದಿಸಬೇಕು.

4) ಜಿಲ್ಲಾ ಖಜಾನೆ ಅಧಿಕಾರಿಗಳು “ಖಜಾನೆ-2 ತಂತ್ರಾಂಶ’ ಅನುಷ್ಠಾನದ ಹಿನ್ನೆಲೆಯಲ್ಲಿ ವಂತಿಗೆ ರೂಪದಲ್ಲಿ ಕಟಾವು ಮಾಡಿದ ಹಣವನ್ನು ಸಂಬಂಧಿಸಿದ ಪ್ರಾಧಿಕಾರದ ಬ್ಯಾಂಕ್ ಖಾತೆಗೆ ಇ-ಪಾವತಿ ಮೂಲಕ ನೇರವಾಗಿ ಜಮೆ ಮಾಡಲು ಈ ಕೆಳಕಂಡಂತೆ ಕ್ರಮವಹಿಸುವುದು.

1. ವೇತನ ಬಿಲ್ಲಿನಲ್ಲಿ ಕಟಾಯಿಸಲಾದ ಮೊತ್ತವನ್ನು ಜಿಲ್ಲಾ ಖಜಾನಾಧಿಕಾರಿಗಳು ಈ ಉದ್ದೇಶಕ್ಕಾಗಿ ಖಜಾನೆಯಲ್ಲಿ ಈಗಾಗಲೇ ತೆರೆದಿರುವ Deposit Account ಗೆ ಜಮೆ ಮಾಡುವುದು.ಈ ರೀತಿ ಜಮೆಯಾದ ಒಟ್ಟು ಮೊತ್ತವನ್ನು Deposit ಖಾತೆಯಿಂದ ಜಿಲ್ಲಾಧಿಕಾರಿಗಳ PD ಖಾತೆಗೆ TTR ಮೂಲಕ ಖಜಾನಾಧಿಕಾರಿಗಳು ವರ್ಗಾವಣೆ ಮಾಡುವುದು.ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಗೆ ಜಮೆ ಮಾಡಲಾದ ಮೊತ್ತವನ್ನು ಪಿ.ಡಿ. ಖಾತೆಯಿಂದ ಸಾಹಿತ್ಯ ಸಮ್ಮೇಳನದ ಪ್ರಾಧಿಕಾರದ ಅಧಿಕೃತ ಖಾತೆಗೆ ಜಮೆ ಮಾಡುವುದು.

2024ರ ನವೆಂಬರ್ ತಿಂಗಳಿನಲ್ಲಿ ಸ್ವೀಕರಿಸಲಾದ ವೇತನ ಬಿಲ್ಲುಗಳ ನಿರ್ವಹಣೆಯನ್ನು 2024ರ ಡಿಸೆಂಬರ್ 28ನೇ ದಿನಾಂಕದೊಳಗೆ ಪೂರೈಸಬೇಕು.ಮಹಾಲೇಖಪಾಲರು ನೀಡಿದ ಅಧಿಕಾರ ಪತ್ರದ ಮೇಲೆ ತಮ್ಮ ವೇತನವನ್ನು ಖಜಾನೆಯಿಂದ ಪಡೆಯುವ ಅಧಿಕಾರಿಗಳ ಪ್ರಕರಣದಲ್ಲಿಯೂ ಸಹ ಮೇಲೆ ಕಾಣಿಸಿದ ಕ್ರಮವನ್ನು ಪಾಲಿಸುವುದು ಎಂದು ಸೂಚನೆ ನೀಡಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular