ಬೆಂಗಳೂರು : ಡಿ. 5 ರಂದು ಹಾಸನದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಹಮ್ಮಿಕೊಂಡಿರುವ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶದ ವಿರುದ್ಧ ಎಐಸಿಸಿಗೆ ದೂರು ಸಲ್ಲಿಸಿರುವ ವಿಚಾರ ಬೆಳಕಿಗೆ ಬಂದಿದೆ. ಅನಾಮಧೇಯ ವ್ಯಕ್ತಿಯೋರ್ವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೂರು ಸಲ್ಲಿಸಿದ್ದಾರೆ.
ಹಾಸನದಲ್ಲಿ ಸಿದ್ದರಾಮಯ್ಯ ಪರ ಸ್ವಾಭಿಮಾನಿ ಸಮಾವೇಶ ನಡೆಸಲಾಗುತ್ತಿದೆ. ಇದನ್ನು ಪಕ್ಷದ ವೇದಿಕೆಯಿಂದ ಹೊರತಾದ ಕಾರ್ಯಕ್ರಮ ಎಂದು ಬಿಂಬಿಸಲಾಗುತ್ತಿದೆ. ಯಾಕೆ ಪಕ್ಷದ ಚಿಹ್ನೆ ಮೇಲೆ ಸಮಾವೇಶ ಮಾಡುತ್ತಿಲ್ಲ, ಅಧಿಕಾರ ನೀಡಿದ ಕಾಂಗ್ರೆಸ್ ಪಕ್ಷವನ್ನು ದೂರವಿಟ್ಟು ಸಮಾವೇಶ ನಡೆಸುವ ಉದ್ದೇಶ ಏನು..? ಕಾಂಗ್ರೆಸ್ ಚಿಹ್ನೆ ಬಳಸಿಕೊಂಡೇ ಹಾಸನ ಸಮಾವೇಶ ಮಾಡಿ ಎಂದು ತಿಳಿಹೇಳಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.