ಮೈಸೂರು: ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಇರ್ತಾರೋ, ಇಲ್ವೋ ಗೊತ್ತಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ರಾಜಕೀಯ ಸಲಹೆಗಾರ ಬಿ.ಆರ್.ಪಾಟೀಲ್ ಹೇಳಿಕೆ ಚರ್ಚೆಗೆ ಕಾರಣವಾಗುತ್ತಿದ್ದಂತೆ ಈ ಬಗ್ಗೆ ಎಂಎಲ್ ಸಿ ಡಾ.ಯತೀಂದ್ರ ಸ್ಪಷ್ಟೀಕರಣ ನೀಡಿದ್ದಾರೆ. ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ನೇರವಾಗಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಯತೀಂದ್ರ ಸಿದ್ದರಾಮಯ್ಯ, ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಉಪಚುನಾವಣೆ ಫಲಿತಾಂಶದಿಂದ ವಿಶ್ವಾಸ ಹೆಚ್ಚಾಗಿದೆ ಎಂದು ಹೇಳಿದರು.
ಜನರ ಬೆಂಬಲ ನಮ್ಮ ಪರವಾಗಿದೆ. ಹಾಗಾಗಿ 5 ವರ್ಷ ಸಿದ್ದರಾಮಯ್ಯನವರು ಸಿಎಂ ಆಗಿ ಮುಂದುವರೆಯಲಿದ್ದಾರೆ. ಸಿಎಂ ಬದಲಾವಣೆ ಮಾಡಬೇಕು ಎಂದು ಶಾಸಕರ ಮನಸ್ಸಿನಲ್ಲಿ ಇಲ್ಲ. ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ರಾಜೀನಾಮೆಗೆ ವಿಪಕ್ಷಗಳು ಒತ್ತಾಯ ಮಾಡುತ್ತಿವೆ. ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಒತ್ತಾಯಿಸುತ್ತಿದ್ದಾರೆ. ನಾವು ರಾಜೀನಾಮೆ ನೀಡುವ ಪ್ರಶ್ನೆಯೇ ಬರಲ್ಲ. ನಮ್ಮ ತಂದೆ ಸಿಎಂ ಸಿದ್ದರಾಮಯ್ಯ, ತಾಯಿ ಪಾರ್ವತಿ ಅವರ ಮೇಲೆ ವಿಪಕ್ಷಗಳು ಮಾಡುತ್ತಿರುವ ಆರೋಪಗಳು ಸುಳ್ಳು. ಅದು ತನಿಖಾ ಸಂಸ್ಥೆಗಳಿಗೂ ಗೊತ್ತಿದೆ ಎಂದು ಹೇಳಿದರು.