HomeKarnatakaBREAKING NEWS: ಸಿಎಂ ಆಗಲೂ ಆಸೆಯಿದೆ; ಅಧ್ಯಕ್ಷನಾಗಲೂ ಆಸೆಯಿದೆ: ಆದ್ರೆ ಪಕ್ಷ ತೀರ್ಮಾನ ಮಾಡಬೇಕು ಎಂದ...

BREAKING NEWS: ಸಿಎಂ ಆಗಲೂ ಆಸೆಯಿದೆ; ಅಧ್ಯಕ್ಷನಾಗಲೂ ಆಸೆಯಿದೆ: ಆದ್ರೆ ಪಕ್ಷ ತೀರ್ಮಾನ ಮಾಡಬೇಕು ಎಂದ ಸಚಿವ ಸತೀಶ್ ಜಾರಕಿಹೊಳಿ

ಹಾವೇರಿ: ನಮಗೆ ಸಿಎಂ ಆಗಲೂ ಆಸೆಯಿದೆ; ಅಧ್ಯಕ್ಷನಾಗಲೂ ಆಸೆಯಿದೆ. ಆದರೆ ಅಂತಿಮವಾಗಿ ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನ ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಈ ಹಿಂದೆ ಸಿಎಂ ಆಗ್ತಾರೆ ಅಂತಾ ಹೆಸರು ಓಡಾಡ್ತಾ ಇತ್ತು. ಈಗ ಅಧ್ಯಕ್ಷ ಆಗ್ತಾರೆ ಅಂತ ಹೆಸರು ಓಡಾಡ್ತಾ ಇದೆ. ಸಿಎಂ ಆಗಬೇಕು ಎಂಬ ಆಸೆಯೂ ಇದೆ; ಕೆಪಿಸಿಸಿ ಅಧ್ಯಕ್ಷನಾಗುವ ಆಸೆಯೂ ಇದೆ. ಆದರೆ ಇದೆಲ್ಲ ನಮ್ಮ ಉತ್ಸಾಹ ಅಷ್ಟೇ. ಅಂತಿಮವಾಗಿ ಹೈಕಮಾಂಡ್ ನಿರ್ಧಾರವೇ ಫೈನಲ್. ನಾವೆಲ್ಲ ಕಾದು ನೋಡಬೇಕಷ್ಟೇ ಎಂದು ಹೇಳಿದರು.

ಈ ವಿಚಾರವಾಗಿ ನಾನು ಯಾವುದೇ ಒತ್ತಡ ಹಾಕಿಲ್ಲ. ಲಾಭಿ ನಡೆಸಿಲ್ಲ. ಉಪಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿದ್ದೇವೆ ಎಂಬ ತೃಪ್ತಿಯಿದೆ. ಮಂತ್ರಿಯಾಗಿ ಕೆಲಸ ಮಾಡುತ್ತಿದ್ದೇನೆ ಅದರ ಬಗ್ಗೆ ತೃಪ್ತಿಯಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular