ಬಳ್ಳಾರಿ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಬಂಧಿಸಿದಂತೆ ತನಿಖಾ ತಂಡದ ವರದಿ ಬಹಿರಂಗವಾಗಿದ್ದು, ಬಾಣಂತಿಯರ ಸಾವಿಗೆ ಐವಿ (ಇಂಟ್ರಾವೆನಸ್ ದ್ರಾವಣ) ಗ್ಲುಕೋಸ್ ಕಾರಣ ಎಂದು ತಿಳಿದುಬಂದಿದೆ.
ಬಳ್ಳಾರಿ ಆಸ್ಪತ್ರೆಯಲ್ಲಿ ಐವರು ಬಾಣಂತಿಯರ ಸಾವು ಪ್ರಕರಣಗಳ ಪೈಕಿ ನಾಲ್ವರು ಬಾಣಂತಿಯರು ಸಿಸೇರಿಯನ್ ಬಳಿಕ ನೀಡಲಾದ IV ಗ್ಲುಕೋಸ್ ನಿಂದ ಸಾವನ್ನಪ್ಪಿದ್ದರೆ ಎಂದು ಹೇಳಲಾಗಿದೆ. IV ಗ್ಲುಕೋಸ್ ಕಳಪೆ ಗುಣಮಟ್ಟದ್ದಾಗಿತ್ತು ಎನ್ನಲಾಗಿದೆ. ಇದೇ ಕಾರನದಿಂದ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದಾರೆ.
ಐವಿ ಗ್ಲುಕೋಸ್ ಕಳಪೆ ಗುಣಮಟ್ಟದ್ದಾಗಿದ್ದರೂ ವೈದ್ಯರು ಸಿಸೇರಿಯನ್ ವೇಳೆ ಈ ಗ್ಲುಕೋಸ್ ನೀಡಿದ್ದರಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ತನಿಖಾ ತಂಡ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಹೇಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಐವಿ ಗ್ಲುಕೋಸ್ ಬಳಕೆ ಮಾಡದಂತೆ ಆರೋಗ್ಯ ಇಲಾಖೆ ಎಲ್ಲಾ ಆಸ್ಪತ್ರೆಗಳಿಗೂ ಸೂಚನೆ ನೀಡಿದೆ.