ನವದೆಹಲಿ : ಸದ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ,ಪುನಾರಚನೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ರಾಜ್ಯ ಸಚಿವ ಸಂಪುಟ ಪುನಾರಚನೆ ಇಲ್ಲ, ನಾಗೇಂದ್ರರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ನಿರ್ಧಾರ ಮಾಡಲಿದ್ದೇವೆ ಎಂದರು. ಹಾಗೂ ಹಾಸನದಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸಲಿದ್ದೇವೆ ಎಂದರು.
ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಹಾಗೂ ಸಂಸದೆ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿಯಾದರು. ಹಲವು ಯೋಜನೆಗಳಿಗೆ ಅನುಮತಿ ನೀಡುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು .