ಬೆಂಗಳೂರು : ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ನವೆಂಬರ್ 29 ರಿಂದ ಡಿಸೆಂಬರ್ 3 ರವರೆಗೆ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಿಡಿಲು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ನವೆಂಬರ್ 29ರಂದು ನಾಳೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಬೆಂಗಳೂರು ನಗರ, ರಾಮನಗರ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕೋಲಾರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ. ಬೆಂಗಳೂರು ನಗರ, ರಾಮನಗರದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ತುಮಕೂರು, ಚಾಮರಾಜನಗರ ಜಿಲ್ಲೆಗಳಲ್ಲೊ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.