ಬೆಂಗಳೂರು : ಬೆಂಗಳೂರಿಗೂ ‘ಫಂಗಲ್’ ಚಂಡಮಾರುತದ ಪರಿಣಾಮ ತಟ್ಟಿದ್ದು, ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರಿನ ಹಲವೆಡೆ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದೆ. ಗಾಳಿ ಸಹಿತ ಬೆಂಗಳೂರಿನ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಹನ ಸವಾರರು, ಸಾರ್ವಜನಿಕರು ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ನವೆಂಬರ್ 29 ರಿಂದ ಡಿಸೆಂಬರ್ 3 ರವರೆಗೆ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಿಡಿಲು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಬೆಂಗಳೂರು ನಗರ, ರಾಮನಗರ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.