alex Certify ‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಡಿ.14 ರಂದು ‘ರಾಷ್ಟ್ರೀಯ ಲೋಕ ಅದಾಲತ್’.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಡಿ.14 ರಂದು ‘ರಾಷ್ಟ್ರೀಯ ಲೋಕ ಅದಾಲತ್’.!

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಡಿ.14 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಆದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳುವಂತೆ ಕ.ರಾ.ಕಾ.ಸೇ.ಪ್ರಾ.ದ ಸದಸ್ಯ ಕಾರ್ಯದರ್ಶಿ ಎಂ.ಎಲ್. ರಘುನಾಥ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸುವವರು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥ ಮಾಡಿಕೊಳ್ಳುವುದು.

ಹೆಚ್ಚಿನ ಮಾಹಿತಿಗಾಗಿ www.kslsa.kar.nic.in, ಸಹಾಯವಾಣಿ ಸಂ.: 15100 ಅಥವಾ ನಿಮ್ಮ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳನ್ನು ಸಂಪರ್ಕಿಸುವುದು. ಹಾಗೂ ಉಚ್ಛ ನ್ಯಾಯಾಲಯ ಕಾನೂನು ಸೇವೆಗಳ ಸಮಿತಿ, ಬೆಂಗಳೂರು – 080-522222919/22869988/22954809, ಉಚ್ಛ ನ್ಯಾಯಾಲಯ ಕಾನೂನು ಸೇವೆಗಳ ಸಮಿತಿ, ಧಾರವಾಡ- 0836-2485242, ಉಚ್ಛ ನ್ಯಾಯಾಲಯ ಕಾನೂನು ಸೇವೆಗಳ ಸಮಿ, ಕಲಬುರುಗಿ= 08472-264141 ಮತ್ತು ಶಿವಮೊಗ್ಗ 08182-222218, ಖಾಯಂ ಜನತಾ ನ್ಯಾಯಾಲಯಗಳ ಕಾರ್ಯಾಲಯದ ದೂ.ಸಂ.: ಬೆಂಗಳೂರು-080-22111726 ಗಳನ್ನು ಸಹ ಸಂಪರ್ಕಿಸಬಹುದಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...