alex Certify BIG NEWS: ನಕ್ಸಲ್ ನಾಯಕ ವಿಕ್ರಂ ಗೌಡ ಎನ್ ಕೌಂಟರ್ ಬಗ್ಗೆ ನ್ಯಾಯಾಂಗ ತನಿಖೆ ಅಗತ್ಯವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಕ್ಸಲ್ ನಾಯಕ ವಿಕ್ರಂ ಗೌಡ ಎನ್ ಕೌಂಟರ್ ಬಗ್ಗೆ ನ್ಯಾಯಾಂಗ ತನಿಖೆ ಅಗತ್ಯವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

ಉಡುಪಿ: ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ನಕಲಿಯಲ್ಲ. ಇಂತಹ ಅನುಮಾನ ಬೇಡ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಸಚಿವರು ಆಗಿರುವ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.

ಉಡುಪಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎನ್ ಕೌಂಟರ್ ಕುರಿತು ನ್ಯಾಯಾಂಗ ತನಿಖೆಯ ಅವಶ್ಯಕತೆ ಇಲ್ಲ. ಅಗತ್ಯವಿದ್ದರೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಿಕ್ರಮ್ ಗೌಡ ವಿರುದ್ಧ ಹಲವು ಪ್ರಕರಣಗಳು ಇದ್ದವು. ನಕ್ಸಲ್ ಚಟುವಟಿಕೆ ನಿಯಂತ್ರಿಸಬೇಕು ಎಂಬುದು ಸರ್ಕಾರದ ನಿರ್ಧಾರ. ಕೂಂಬಿಂಗ್ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡ ಬಳಿ ಕೂಡ ಶಸ್ತ್ರಾಸ್ತ್ರಗಳು ಇದ್ದವು. ವಿಕ್ರಂ ಗೌಡ ಒಂದು ಬಾರಿ ಫೈರಿಂಗ್ ಮಾಡಿದ್ದರಿಂದ ಪ್ರತಿ ದಾಳಿ ಮಾಡದಿದ್ದರೆ ಪೊಲೀಸರ ಜೀವಕ್ಕೆ ಹಾನಿ ಆಗುತ್ತಿತ್ತು ಎಂದರು.

ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತದೆ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದೆ. ಸಂಶಯ ಇದ್ದವರಿಗೆ ನಾವು ಮತ್ತೆ ಸ್ಪಷ್ಟನೆ ಕೊಡಲು ತಯಾರಿದ್ದೇವೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...