ಉತ್ತರ ಪ್ರದೇಶದ ವಾರಾಣಾಸಿ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ ಕ್ಯಾಂಟ್ ರೈಲು ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 150ಕ್ಕೂ ಹೆಚ್ಚು ದ್ವಿಚಕ್ರವಾಹನಗಳು ಸುಟ್ಟು ಕರಕಲಾಗಿವೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಧಾವಿಸಿರುವ ರೈಲ್ವೆ ರಕ್ಷಣಾ ಪಡೆ, ಅಗ್ನಿಶಾಮಕ ಸಿಬ್ಬಂದಿ, ಹಾಗೂ ಪೊಲಿಸರು ಬೆಂಕಿ ನಂದಿಸಿದ್ದಾರೆ.
ರೈಲ್ವೆ ನೌಕರರಿಗಾಗಿ ಪಾರ್ಕಿಂಗ್ ಸ್ಟ್ಯಾಂಡ್ ನಿರ್ಮಿಸಲಾಗಿತ್ತು. ಈ ಸ್ಥಳದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಹಲವು ವಾಹನಗಳು ಸುಟ್ಟು ಹೋಗಿವೆ. ಭಾರಿ ಹಾನಿಯುಂಟಾಗಿದೆ ಎಂದು ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಲಾಲ್ಜಿ ಚೌಧರಿ ತಿಳಿಸಿದ್ದಾರೆ.