ಮಲಮಗಳ ಮೇಲೆ ಅತ್ಯಾಚಾರ; ಕೇರಳ ನ್ಯಾಯಾಲಯದಿಂದ ಆರೋಪಿಗೆ 141 ವರ್ಷಗಳ ಜೈಲು ಶಿಕ್ಷೆ

ತಾಯಿ ಮನೆಯಲ್ಲಿ ಇಲ್ಲದಿದ್ದಾಗ ತನ್ನ ಅಪ್ರಾಪ್ತ ಮಗಳ ಮೇಲೆ ಹಲವು ವರ್ಷಗಳಿಂದ ಪದೇ ಪದೇ ಅತ್ಯಾಚಾರ ಎಸಗಿದ್ದ ವ್ಯಕ್ತಿಯೊಬ್ಬನಿಗೆ ಕೇರಳದ ನ್ಯಾಯಾಲಯವೊಂದು 141 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಮಂಜೇರಿ ಫಾಸ್ಟ್ ಟ್ರಾಕ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಶ್ರಫ್ ಎಎಂ ಅವರು ವ್ಯಕ್ತಿಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, ಐಪಿಸಿ ಮತ್ತು ಬಾಲಾಪರಾಧ ನ್ಯಾಯ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಒಟ್ಟು 141 ವರ್ಷಗಳವರೆಗೆ ವಿವಿಧ ಅವಧಿಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದಾರೆ.

ಆದಾಗ್ಯೂ, ವ್ಯಕ್ತಿಯು 40 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಾನೆ. ನವೆಂಬರ್ 29 ರ ನ್ಯಾಯಾಲಯದ ಆದೇಶದ ಪ್ರಕಾರ ವಿವಿಧ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸಬೇಕು. ನ್ಯಾಯಾಲಯ, ಅಪರಾಧಿಯು ಸಂತ್ರಸ್ತೆಗೆ ಪರಿಹಾರವಾಗಿ 7.85 ಲಕ್ಷ ರೂಪಾಯಿಗಳನ್ನು ನೀಡುವಂತೆಯೂ ಆದೇಶಿಸಿದೆ.

ಅಪರಾಧಿ ಮತ್ತು ಬಲಿಪಶು ತಮಿಳುನಾಡು ಮೂಲದವರಾಗಿದ್ದು, ಮಲತಂದೆ 2017 ರಿಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎಂದು ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹುಡುಗಿ, ಸ್ನೇಹಿತನ ಸಲಹೆಯ ಮೇರೆಗೆ ಅಂತಿಮವಾಗಿ ತನ್ನ ತಾಯಿಗೆ ತಿಳಿಸಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು ಎಂದು ಅಧಿಕಾರಿ ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read