ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ಸರ್ಕಾರದಿಂದ ಎರಡು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಪರಿಶೀಲನಾ ಸಭೆಯ ನಂತರ ಮಾತನಾಡಿದ ಸಿಎಂ, ಕಂಪನಿಯಿಂದಲೂ ಪರಿಹಾರ ನೀಡಲು ಸೂಚಿಸಲಾಗಿದೆ. ಆಸ್ಪತ್ರೆ ಎಂಡಿಗೆ ನೋಟಿಸ್ ಕೊಡಲು ಸೂಚನೆ ಕೊಟ್ಟಿದ್ದೇನೆ. ಪಶ್ಚಿಮ ಬಂಗಾಳದ ಕಂಪನಿಯನ್ನು ಬ್ಲಾಕ್ ಲಿಸ್ಟ್ ಗೆ ಹಾಕಿದ್ದೇವೆ. ಬಳ್ಳಾರಿ ಜಿಲ್ಲಾ ಔಷಧ ನಿಯಂತ್ರಕನನ್ನು ಸಸ್ಪೆಂಡ್ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಔಷಧಗಳನ್ನು ಹಿಂಪಡೆಯಲಾಗುವುದು. ಆಪರೇಷನ್ ಮಾಡಿದ ವೈದ್ಯರ ತಪ್ಪಿಲ್ಲ ಎಂದು ಪ್ರಾಥಮಿಕ ವರದಿಯಲ್ಲಿ ಗೊತ್ತಾಗಿದೆ. ಈ ರೀತಿ ಆಗದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.