ಬೆಂಗಳೂರು: ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಶೇಕಡ 24 ರಷ್ಟು ಮೀಸಲಾತಿ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪರಿಶಿಷ್ಟ ಜಾತಿ ವರ್ಗಕ್ಕೆ ಶೇಕಡ 17ರಷ್ಟು, ಪರಿಶಿಷ್ಟ ಪಂಗಡ ವರ್ಗಕ್ಕೆ ಶೇಕಡ 7ರಷ್ಟು ಮೀಸಲಾತಿ ನಿಗದಿ ಮಾಡಲಾಗಿದೆ. ಸಮಾಜ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ವಕೀಲರನ್ನು ನೇಮಕ ಮಾಡುವಾಗ ಕನಿಷ್ಠ ಶೇಕಡ 24 ರಷ್ಟು ಮೀಸಲಾತಿ ಕಲ್ಪಿಸಿ ನೇಮಕಾತಿ ಮಾಡಿಕೊಳ್ಳುವಂತೆ ಕಾನೂನು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು. ಸಮಾಜ ಕಲ್ಯಾಣ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದ ಕಾನೂನು ಇಲಾಖೆ ಸರ್ಕಾರಿ ವಕೀಲರ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಮೀಸಲಾತಿ ಕಲ್ಪಿಸಲು ಒಪ್ಪಿಗೆ ನೀಡಿದೆ. ಇದರ ಅನ್ವಯ ಮೀಸಲಾತಿ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ.