ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ಭಾಗದಲ್ಲಿ ಭೂಮಿ ಕಂಪಿಸಿದೆ.
ಕುಮಟಾ, ಶಿರಸಿ ಭಾಗದ ಘಟ್ಟಪ್ರದೇಶದಲ್ಲಿ ಭೂಮಿ ಕಂಪಿಸಿದೆ. ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ದೇವಿಮನೆಘಟ್ಟ, ಶಿರಸಿ ತಾಲೂಕಿನ ರಾಗಿಹೊಸಹಳ್ಳಿ, ಕಸಗೆ, ಬಂಡಳ ಭಾಗದಲ್ಲಿ ಭೂಮಿ ಕಂಪಿಸಿದೆ. ಎರಡು ತಾಲೂಕುಗಳ ಹಲವು ಕಡೆ ಮೂರು ಸೆಕೆಂಡ್ ಭೂಮಿ ಕಂಪಿಸಿದ ಅನುಭವವಾಗಿದೆ.
ಮನೆ ಹಾಗೂ ಹೊರಗಿದ್ದ ಅನೇಕರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಭಯಭೀತಗೊಂಡ ಜನ ತಮಗೆ ಆದ ಅನುಭವ ಹಂಚಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.