ನವದೆಹಲಿ: ಮುಂದಿನ ವರ್ಷ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಭಾನುವಾರ ಮಹತ್ವದ ಘೋಷಣೆ ಮಾಡಿದ್ದಾರೆ.
ಚುನಾವಣೆಯಲ್ಲಿ ಯಾವುದೇ ಮೈತ್ರಿ ಇರುವುದಿಲ್ಲ ಮತ್ತು ಮೂರನೇ ಬಾರಿಗೆ ಸರ್ಕಾರವನ್ನು ಉಳಿಸಿಕೊಳ್ಳಲು ಎಎಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಅವರು ಹೇಳಿದ್ದಾರೆ.
ಮೈತ್ರಿ ಕುರಿತ ಊಹಾಪೋಹಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದೆಹಲಿಯಲ್ಲಿ(ವಿಧಾನಸಭಾ ಚುನಾವಣೆಗೆ) ಯಾವುದೇ ಮೈತ್ರಿ ಇರುವುದಿಲ್ಲ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ವಿರುದ್ಧ ಎಎಪಿ ಮತ್ತು ಕಾಂಗ್ರೆಸ್ ಪಕ್ಷಗಳು ಕೈಜೋಡಿಸಬಹುದೆಂದು ಈ ಹಿಂದೆ ಊಹಿಸಲಾಗಿತ್ತು. ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಜ್ರಿವಾಲ್ ಮೈತ್ರಿ ಇಲ್ಲ ಎಂದು ಹೇಳಿಕೆ ನೀಡಿ ಮೈತ್ರಿ ಕುರಿತಾದ ಚರ್ಚೆಗೆ ತೆರೆ ಎಳೆದಿದ್ದಾರೆ.