ಉಡುಪಿ: ಈಜಲು ಹೋಗಿದ್ದ ಇಬ್ಬರು ಬಾಲಕರು ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶಂಕರನಾರಾಯಣ ಬೆಳ್ವೆ ಸಮೀಪ ಗುಮ್ಮಲ ಡ್ಯಾಂನಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಶ್ರೀಶ(13), ಪ್ರಜ್ವಲ್(14) ಮೃತಪಟ್ಟ ಬಾಲಕರು ಎಂದು ಹೇಳಲಾಗಿದೆ. ರಜೆ ಹಿನ್ನೆಲೆಯಲ್ಲಿ ನಾಲ್ವರು ಬಾಲಕರು ಮನೆ ಸಮೀಪದ ಡ್ಯಾಂ ಗೆ ಈಜಲು ಹೋಗಿದ್ದಾರೆ. ಈಜುವ ವೇಳೆ ಶ್ರೀಶ ಹಾಗೂ ಪ್ರಜ್ವಲ್ ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಶಂಕರನಾರಾಯಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.