alex Certify BIG NEWS: ʼಭಾರತ ವಿಕಾಸ ಸಂಗಮ ಸಂಸ್ಥೆʼ ಆಯೋಜಿಸಿರುವ ಕಾರ್ಯಕ್ರಮಕ್ಕೆ ಹೋಗದಿರಲು ಸಿಎಂ ತೀರ್ಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ʼಭಾರತ ವಿಕಾಸ ಸಂಗಮ ಸಂಸ್ಥೆʼ ಆಯೋಜಿಸಿರುವ ಕಾರ್ಯಕ್ರಮಕ್ಕೆ ಹೋಗದಿರಲು ಸಿಎಂ ತೀರ್ಮಾನ

ʼಭಾರತ ವಿಕಾಸ ಸಂಗಮ ಸಂಸ್ಥೆʼ ಭಾರತೀಯ ಸಂಸ್ಕೃತಿ ಉತ್ಸವ ಆಯೋಜಿಸಿದ್ದು, ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಲಿದ್ದಾರೆಂದು ಹೇಳಲಾಗಿತ್ತು.

ಆದರೆ ಇದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿದ್ದು, ಇದು ರಾಷ್ಟ್ರೀಯ ಸ್ವಯಂ ಸೇವಕ ಸಂಘದವರ ಕಾರ್ಯಕ್ರಮ ಎಂದು ಹೇಳಿದ್ದರು. ಇದೀಗ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿರುವ ಅವರು, ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ.

ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ. ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು ತೀರ್ಮಾನಿಸಿದ್ದೇನೆ ಎಂದು ಹೇಳಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...