ʼಭಾರತ ವಿಕಾಸ ಸಂಗಮ ಸಂಸ್ಥೆʼ ಭಾರತೀಯ ಸಂಸ್ಕೃತಿ ಉತ್ಸವ ಆಯೋಜಿಸಿದ್ದು, ಇದರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಲಿದ್ದಾರೆಂದು ಹೇಳಲಾಗಿತ್ತು. ಅಲ್ಲದೇ ಈ ಕುರಿತು ಆಹ್ವಾನ ಪತ್ರಿಕೆಗಳೂ ಮುದ್ರಣವಾಗಿದ್ದವು
ಆದರೆ ಇದು ರಾಷ್ಟ್ರೀಯ ಸ್ವಯಂ ಸೇವಕ ಸಂಘದವರ ಅಂಗಸಂಸ್ಥೆಯ ಕಾರ್ಯಕ್ರಮ. ಹೀಗಾಗಿ ಇದಕ್ಕೆ ಹೋಗಬಾರದೆಂದು ಕೆಲವರಿಂದ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿದ್ದು, ಇದೀಗ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಇದರ ಮಧ್ಯೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದ ಸಚಿವರಾದ ಪ್ರಿಯಾಂಕ್ ಖರ್ಗೆ ತಾವೂ ಕೂಡಾ ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲವೆಂದು ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಅವರು ಪೋಸ್ಟ್ ಹಾಕಿದ್ದು, ಭಾರತ ವಿಕಾಸ ಸಂಗಮ ಸಂಸ್ಥೆ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಎಂಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವುದನ್ನು ಮಾಧ್ಯಮಗಳ ಮೂಲಕ ಗಮನಿಸಿದೆ. ನನಗೆ ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ಇಲ್ಲ, ನನಗೆ ಆಹ್ವಾನವೂ ಬಂದಿಲ್ಲ. ನನಗೆ ಆಹ್ವಾನ ನೀಡದೆಯೇ ನನ್ನ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿ ಹಂಚುವುದು ಸಮಂಜಸವಲ್ಲ ಎಂದು ಹೇಳಿದ್ದಾರೆ. ಈ ಮೂಲಕ ತಾವು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂಬುದನ್ನು ಸೂಚಿಸಿದ್ದಾರೆ.
ಭಾರತ ವಿಕಾಸ ಸಂಗಮ ಸಂಸ್ಥೆ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಎಂಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವುದನ್ನು ಮಾಧ್ಯಮಗಳ ಮೂಲಕ ಗಮನಿಸಿದೆ.
ನನಗೆ ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ಇಲ್ಲ, ನನಗೆ ಆಹ್ವಾನವೂ ಬಂದಿಲ್ಲ.
ನನಗೆ ಆಹ್ವಾನ ನೀಡದೆಯೇ ನನ್ನ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿ ಹಂಚುವುದು…
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) December 1, 2024