alex Certify HSRP ಅಳವಡಿಸಿಕೊಳ್ಳದ 1.45 ಕೋಟಿ ವಾಹನಗಳು: ಡಿ. 31 ರವರೆಗೆ ಗಡುವು ವಿಸ್ತರಿಸಿದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

HSRP ಅಳವಡಿಸಿಕೊಳ್ಳದ 1.45 ಕೋಟಿ ವಾಹನಗಳು: ಡಿ. 31 ರವರೆಗೆ ಗಡುವು ವಿಸ್ತರಿಸಿದ ಸರ್ಕಾರ

ಬೆಂಗಳೂರು: ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(HSRP) ಅಳವಡಿಕೆ ಗಡುವನ್ನು ಸರ್ಕಾರ ಐದನೇ ಬಾರಿಗೆ ವಿಸ್ತರಿಸಿದ್ದು, ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಿದೆ.

ಹೆಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ನಾಲ್ಕು ಬಾರಿ ಗಡುವು ಮುಂದೂಡಿದ್ದ ಸರ್ಕಾರ ಇದೀಗ ಐದನೇ ಬಾರಿಗೆ ಗಡುವು ವಿಸ್ತರಿಸಿದೆ. ಇತ್ತೀಚಿಗಷ್ಟೇ ಹೈಕೋರ್ಟ್ ಹೆಚ್.ಎಸ್.ಆರ್.ಪಿ. ಅಳವಡಿಸಿದ ಸವಾರರ ವಿರುದ್ಧ ಡಿಸೆಂಬರ್ 4ರ ವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿತ್ತು. ರಾಜ್ಯ ಸರ್ಕಾರ ಹೆಚ್.ಎಸ್.ಆರ್.ಪಿ. ಅಳವಡಿಕೆ ಗಡುವು ವಿಸ್ತರಿಸಿ ಆದೇಶ ಹೊರಡಿಸಿದೆ.

2019ರ ಏಪ್ರಿಲ್ 1ರ ಮೊದಲು ನೋಂದಣಿಯಾದ ವಾಹನಗಳಿಗೆ ಹೆಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ ರಾಜ್ಯದಲ್ಲಿರುವ ಸುಮಾರು ಎರಡು ಕೋಟಿ ವಾಹನಗಳಲ್ಲಿ ಸದ್ಯ 55 ಲಕ್ಷ ವಾಹನಗಳು ಮಾತ್ರ ಹೆಚ್.ಎಸ್.ಆರ್.ಪಿ. ಅಳವಡಿಸಿಕೊಂಡಿವೆ. ಇನ್ನು 1.45 ಕೋಟಿ ವಾಹನ ಸವಾರರು ಹೆಚ್.ಎಸ್.ಆರ್.ಪಿ. ಅಳವಡಿಸಿಕೊಂಡಿಲ್ಲ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...