HomeKarnatakaಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದ ಸರ್ಕಾರಿ ನೌಕರರಿಗೆ ಶಾಕ್: 4 ಲಕ್ಷ ರೂ. ದಂಡ

ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದ ಸರ್ಕಾರಿ ನೌಕರರಿಗೆ ಶಾಕ್: 4 ಲಕ್ಷ ರೂ. ದಂಡ

ಶಿವಮೊಗ್ಗ: ಸರ್ಕಾರಿ ನೌಕರರು ಅಕ್ರಮವಾಗಿ ಪಡೆದುಕೊಂಡಿದ್ದ ಬಿಪಿಎಲ್ ಕಾರ್ಡ್ ಗಳನ್ನು ಗುರುತಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅವುಗಳನ್ನು ಎಪಿಎಲ್ ಕಾರ್ಡ್ ಗೆ ಬದಲಾಯಿಸಿದೆ.

ಶಿವಮೊಗ್ಗದಲ್ಲಿ 72 ಸರ್ಕಾರಿ ನೌಕರರಿಗೆ 4,12,890 ರೂಪಾಯಿ ದಂಡ ವಿಧಿಸಲಾಗಿದೆ. ರಾಜ್ಯದಾದ್ಯಂತ ಆಕ್ರಮ ಬಿಪಿಎಲ್ ಕಾರ್ಡ್ ಗಳನ್ನು ಎಪಿಎಲ್ ಆಗಿ ಬದಲಿಸುವ ಕಾರ್ಯಕ್ಕೆ ಆಹಾರ ಇಲಾಖೆ ಚಾಲನೆ ನೀಡಿದ್ದು, ಇದರ ಭಾಗವಾಗಿ ಜಿಲ್ಲಾ ಆಹಾರ ಇಲಾಖೆ ಶಿವಮೊಗ್ಗ ಜಿಲ್ಲೆಯಲ್ಲಿ ಆಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದ ಸರ್ಕಾರಿ ನೌಕರರು, ತೆರಿಗೆ ಪಾವತಿದಾರರ ಸಾವಿರಾರು ಕಾರ್ಡ್ ಗಳನ್ನು ಪತ್ತೆ ಮಾಡಿ ಎಪಿಎಲ್ ಗೆ ಪರಿವರ್ತಿಸಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 4.9 ಲಕ್ಷ ಪಡಿತರ ಚೀಟಿಗಳಿದ್ದು, ಇವುಗಳಲ್ಲಿ 1.2 ಲಕ್ಷ ಎಪಿಎಲ್, 3.52 ಲಕ್ಷ ಬಿಪಿಎಲ್, 36,000 ಅಂತ್ಯೋದಯ ಕಾರ್ಡ್ ಗಳಿವೆ. ಕಳೆದ ಏಪ್ರಿಲ್ 1ರಿಂದ ಅ. 31 ರವರೆಗೆ 53,342 ಕಾರ್ಡ್ ಗಳ ಪರಿಶೀಲನೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular