HomeKarnataka'ಫಂಗಲ್' ಚಂಡಮಾರುತ ಎಫೆಕ್ಟ್: ರಾಜ್ಯದ 14 ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ

‘ಫಂಗಲ್’ ಚಂಡಮಾರುತ ಎಫೆಕ್ಟ್: ರಾಜ್ಯದ 14 ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಫಂಗಲ್ ಚಂಡಮಾರುತದ ಪರಿಣಾಮ ರಾಜ್ಯಕ್ಕೂ ತಟ್ಟಿದ್ದು, ಡಿಸೆಂಬರ್ 2 ರಂದು 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳ ಕೆಲವು ಕಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕರಾವಳಿ ಪ್ರದೇಶ, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಂಭವ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಸೆಂಬರ್ 3ರಂದು ಕೂಡ ರಾಜ್ಯದ ವಿವಿಧೆಡೆ ಭಾರಿ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಕೊಡಗು, ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್  ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular