ರಾಯಚೂರು: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕವಿತಾಳ ಗ್ರಾಮದಲ್ಲಿ ನಡೆದಿದೆ.
ರಂಗನಾಥ ನಾಯಕ (35) ಮೃತ ಬೈಕ್ ಸವಾರ. ದೇವತಗಲ್ ಗ್ರಾಮದ ನಿವಾಸಿ. ಲಿಂಗಸಗೂರಿನಿಂದ ರಾಯಚೂರಿಗೆ ಬರುತ್ತಿದ್ದ ವಾಯುವ್ಯ ಸಾರಿಗೆ ಬಸ್ ಬೈಕ್ ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.