ನಂದಮೂರಿ ಬಾಲಕೃಷ್ಣ ಅಭಿನಯದ ‘ಅಖಂಡ’ ಚಿತ್ರ ಬಿಡುಗಡೆಯಾಗಿ ಇಂದಿಗೆ 3 ವರ್ಷ 02-12-2024 3:26PM IST / No Comments / Posted In: Featured News, Live News, Entertainment ಟಾಲಿವುಡ್ ನ ಖ್ಯಾತ ಹಿರಿಯ ನಟ ನಂದಮೂರಿ ಬಾಲಕೃಷ್ಣ ಅಭಿನಯದ ‘ಅಖಂಡ’ ಚಿತ್ರ 2021 ಡಿಸೆಂಬರ್ 2 ರಂದು ತೆರೆಕಂಡು ಬಾಕ್ಸ್ ಆಫೀಸ್ ನಲ್ಲಿ ಹೊಸ ದಾಖಲೆ ಬರೆದಿತ್ತು. ಈ ಚಿತ್ರ ಬಿಡುಗಡೆಯಾಗಿ ಇಂದಿಗೆ ಮೂರು ವರ್ಷಗಳಾಗಿದ್ದು, ನಂದಮೂರಿ ಬಾಲಕೃಷ್ಣ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಸಂಭ್ರಮಿಸಿದ್ದಾರೆ. ಬೋಯಪತಿ ಶ್ರೀನು ನಿರ್ದೇಶನದ ಈ ಚಿತ್ರದಲ್ಲಿ ನಂದಮೂರಿ ಬಾಲಕೃಷ್ಣ, ಪ್ರಜ್ಞಾ ಜೈಸ್ವಾಲ್, ಜಗಪತಿ ಬಾಬು, ಶ್ರೀಕಾಂತ್, ನಿತಿನ್ ಮೆಹ್ತಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವಿನಾಶ್, ವಿಜಿ ಚಂದ್ರಶೇಖರ್, ಶರತ್ ಲೋಹಿತಾಶ್ವ, ಸುರೇಶ್ ಚಂದ್ರ ಮೆನನ್, ಪ್ರಭಾಕರ್, ಶ್ರವಣ್, ಮಹೇಶ್ ಉಳಿದ ತಾರಾಂಗಣದಲ್ಲಿದ್ದಾರೆ. ತಮನ್ S ಸಂಗೀತ ಸಂಯೋಜನೆ ನೀಡಿದ್ದು, ದ್ವಾರಕಾ ಕ್ರಿಯೇಶನ್ಸ್ ಬ್ಯಾನರ್ ನಲ್ಲಿ ಮಿರ್ಯಾಲ ರವೀಂದರ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಕೋಟಗಿರಿ ವೆಂಕಟೇಶ್ವರ ರಾವ್ ಸಂಕಲನ ಹಾಗೂ ಸಿ. ರಾಮಪ್ರಸಾದ್ ಛಾಯಾಗ್ರಾಹಣವಿದೆ.