ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಡಿ.6 ಕ್ಕೆ ವಿಚಾರಣೆ ಮುಂದೂಡಿದೆ.
ಪ್ರಕರಣ ರದ್ದು ಕೋರಿದ್ದ ಬಿಎಸ್ವೈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಮಯದ ಅಭಾವದಿಂದ ಡಿ.6 ರ ಮಧ್ಯಾಹ್ನ 2:30 ಕ್ಕೆ ವಿಚಾರಣೆ ಮುಂದೂಡಿದೆ ಹಾಗೂ ಖುದ್ದು ಹಾಜರಾತಿಗೆ ವಿನಾಯಿತಿ ನೀಡಿದ್ದ ಆದೇಶ ವಿಸ್ತರಿಸಿ ಹೈಕೋರ್ಟ್ ಆದೇಶ ನೀಡಿದೆ.
ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದ ಹೈಕೋರ್ಟ್ ಯಡಿಯೂರಪ್ಪರನ್ನು ಬಂಧಿಸದಂತೆ ಸೂಚನೆ ನೀಡಿತ್ತು. ಬಳಿಕ ವಿಚಾರಣೆಯ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿತ್ತು.ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.