ಕಾಸರಗೋಡು : ಫೆಂಗಲ್ ಚಂಡಮಾರುತದ ಹಿನ್ನೆಲೆ ರಾಜ್ಯದ ಹಲವು ಕಡೆ ಭಾರಿ ಮಳೆಯಾಗುತ್ತಿದೆ.
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಕಾಸರಗೋಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕಾಸರಗೋಡಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ ( ಡಿ.3) ರಜೆ ಘೋಷಣೆ ಮಾಡಲಾಗಿದೆ. ರಜೆ ಘೋಷಿಸಿ ಡಿ.ಸಿ ಕೆ ಇಂಬುಶೇಖರ್ ಆದೇಶ ಹೊರಡಿಸಿದ್ದಾರೆ.
ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಲಲ್ಲಿ ಶೀತ ಗಾಳಿ, ಧಾರಾಕಾರ ಮಳೆ ಸುರಿಯುತ್ತಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಇದರ ಜೊತೆಗೆ ಶೀತಗಾಳಿಯಿಂದಾಗಿ ಜನರು ನಡುಗುವಂತಾಗಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ತುಂತುರು ಮಳೆ ಹಾಗೂ ಶೀತಗಾಳಿ ಹಿನ್ನೆಲೆಯಲ್ಲಿ ಮಕ್ಕಳು ಸಾರ್ವಜನಿಕರು ಎಚ್ಚರ ವಹಿಸಬೇಕೆಂದು ಜಿಲ್ಲಾಧಿಕಾರಿ ಶಿವಶಂಕರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಫೆಂಗಲ್ ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿಯೂ ಅತಿಯಾದ ಚಳಿ, ಶೀತಗಾಳಿ ಬೀಸುತ್ತಿದ್ದು, ಸಾರ್ವಜನಿಕರು ಬೆಚ್ಚಗಿನ ಉಡುಪುಗಳನ್ನು ಧರಿಸಿ, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಅವಶ್ಯವಿದ್ದರಷ್ಟೇ ಮನೆಯಿಂದ ಹೊರ ಹೋಗಬೇಕು ಎಂದು ಸೂಚನೆ ನೀಡಲಾಗಿದೆ.