ಹಾಸನ: ಚಲಿಸುತ್ತಿದ್ದ ಕಾರಿನ ಬ್ರೇಕ್ ಫೇಲ್ ಆಗಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಮಾನಿಕರೆ ಬಳಿ ನಡೆದಿದೆ.
ರಾಕೇಶ್ (28) ಹಾಗೂ ಮಗ ಮೋಕ್ಷಿತ್ (8) ಎಂದು ಗುರುತಿಸಲಾಗಿದೆ. ರಾಕೇಶ್ ಪತ್ನಿ ಆಶಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಚನ್ನರಾಯಪತ್ಟಣದ ಶ್ರವಣಿಗೇರಿ ಗ್ರಾಮಕ್ಕೆ ದಂಪತಿ ಕಾರಿನಲ್ಲಿ ತೆರಳುತ್ತಿದ್ದಾಗ ಕಾರಿನ ಬ್ರೇಕ್ ಫೇಲ್ ಆಗಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಗುದ್ದಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ತಂದೆ-ಮಗ ಸಾವನ್ನಪ್ಪಿದ್ದಾರೆ.
ಚನ್ನರಾಯಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.