ಬೆಂಗಳೂರು : ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ ನೀಡಲಾಗಿದ್ದು, ರಾಜ್ಯದ 4 ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.
* ಚಾಮರಾಜನಗರ ಜಿಲ್ಲೆಯಲ್ಲಿ ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜು ಹೊರತು ಪಡಿಸಿ ಉಳಿದ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ಇರುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಿಲ್ಲ ಎಂದು ಡಿಸಿ ತಿಳಿಸಿದ್ದಾರೆ.
*ಫೆಂಗಲ್ ಚಂಡಮಾರುತದ ಪರಿಣಾಮ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ಮಂಗಳವಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಕೊಡಗು ಜಿಲ್ಲೆಯಲ್ಲಿ ಮಂಗಳವಾರವೂ ರಜೆ ಘೋಷಣೆ ಮಾಡಲಾಗಿದೆ. ಕೊಡಗು ನಾಳೆ ಬೆಳಿಗ್ಗೆ 8.30 ವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪದವಿ, ಸ್ನಾತಕೋತ್ತರ ಪದವಿ ಹೊರತು ಪಡಿಸಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
*ದಕ್ಷಿಣ ಕನ್ನಡ
ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಡಿಸೆಂಬರ್ 3 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು (12 ನೇ ತರಗತಿಯವರೆಗೆ) ಡಿಸೆಂಬರ್ 3 ರ ಮಂಗಳವಾರ ಮುಚ್ಚಲ್ಪಡುತ್ತವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
*ಚಿಕ್ಕಮಗಳೂರು
* ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.