ಬಳ್ಳಾರಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಕಾನ್ ಸ್ಟೆಬಲ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಮಧ್ಯಾಹ್ನ ಹಚ್ಚೋಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ಬಳ್ಳಾರಿ ಸಮೀಪ ನಡೆದಿದೆ.
ಇನಾಯತ್(46) ಮೃತಪಟ್ಟವರು ಎಂದು ಹೇಳಲಾಗಿದೆ. ಹಚ್ಚೊಳ್ಳಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇನಾಯತ್ ಕರ್ತವ್ಯ ಮುಗಿಸಿ ಸಿರಗುಪ್ಪಕ್ಕೆ ಬೈಕ್ ಲ್ಲಿ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿ ಹಾಕಿದ್ದ ಭತ್ತದ ರಾಶಿ ಮತ್ತು ಹುಲ್ಲಿನಿಂದಾಗಿ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಚ್ಚೋಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಸ್ಪಿ ಶೋಭಾರಾಣಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಆಗಲಿದ್ದಾರೆ,