ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಭಾರಿ ಮಳೆ ಶೀತಗಾಳಿ ವಾತಾವರಣ ಇದೆ. ಮುನ್ನೆಚ್ಚರಿಕೆ ಪರಿಣಾಮ 11 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ಇಂದು (DEC 3) ರಜೆ ನೀಡಲಾಗಿದೆ.
ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಆರೆಂಜ್ ಅಲರ್ಟ್ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ನಾಳೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆ ಮೇರೆಗೆ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ರಜೆ ನೀಡಲಾಗಿದ್ದು, ಮತ್ತೊಂದು ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸಲು ತಿಳಿಸಲಾಗಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆ ಪದವಿ ಕಾಲೇಜುಗಳಿಗೆ ರಜೆ ಇರುವುದಿಲ್ಲ. ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಕಾಲೇಜುಗಳಿಗೆರಜೆ ನೀಡಲಾಗಿದೆ. ಅಂಗನವಾಡಿ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಹಿನ್ನಲೆಯಲ್ಲಿ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.
ಶಿವಮೊಗ್ಗದಲ್ಲಿ ರಜೆ
ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಮಕ್ಕಳ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಡಿಸೆಂಬರ್ 3ರಂದು ಮಂಗಳವಾರ ಶಿವಮೊಗ್ಗ ಜಿಲ್ಲೆಯಾದ್ಯಂತ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳು ಮತ್ತು ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಈ ರಜೆ ಎಲ್ಲಾ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಮತ್ತು ಅಂಗನವಾಡಿ ಶಿಶು ಪಾಲನಾ ಕೇಂದ್ರಗಳಿಗೆ ಅನ್ವಯವಾಗುತ್ತದೆ.
ಮಂಡ್ಯ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಮೈಸೂರು ಜಿಲ್ಲೆಯ ಅಂಗನವಾಡಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಚಾಮರಾಜನಗರ ಜಿಲ್ಲೆಯ ಶಾಲೆಗಳು ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ.
ರಾಮನಗರ, ಚಿಕ್ಕಬಳ್ಳಾಪುರ, ಉಡುಪಿ, ಕೊಡಗು, ಕೋಲಾರ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ.