ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ ನಾಪತ್ತೆಯಾಗಿದ್ದಾರೆ. ಕೊಡಗು ಜಿಲ್ಲೆ ಗೋಣಿಕೊಪ್ಪ ನಿವಾಸಿ ದೀಕ್ಷಿತ್(17) ನಾಪತ್ತೆಯಾದ ವಿದ್ಯಾರ್ಥಿ ಎಂದು ಹೇಳಲಾಗಿದೆ.
ರಜೆಯಲ್ಲಿ ಮನೆಗೆ ತೆರಳಿದ್ದ ದೀಕ್ಷಿತ್ ಮತ್ತೆ ಹಾಸ್ಟೆಲ್ ಗೆ ಮರಳಿಲ್ಲವೆಂದು ದೂರು ನೀಡಲಾಗಿದೆ. ನವೆಂಬರ್ 5 ರಿಂದ ದೀಕ್ಷಿತ್ ನಾಪತ್ತೆಯಾಗಿದ್ದಾರೆ ಎಂದು ಗೋಣಿಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
5.5 ಅಡಿಗೆ ಎತ್ತರ, ಗೋಧಿ ಮೈ ಬಣ್ಣ, ಚಿಗುರು ಮೀಸೆ, ತುಟಿಯ ಕೆಳಭಾಗದಲ್ಲಿ ಕಪ್ಪು ಮಚ್ಚೆ ಇದೆ. ಕನ್ನಡ, ಹಿಂದಿ, ಇಂಗ್ಲಿಷ್ ಮಾತನಾಡುವ ಈತ ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ತುಂಬು ತೋಳಿನ ಟೀ-ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿದ್ದರು. ವಿದ್ಯಾರ್ಥಿಯ ಬಗ್ಗೆ ಮಾಹಿತಿ, ಗುರುತು ಪತ್ತೆಯಾದಲ್ಲಿ ಗೋಣಿಕೊಪ್ಪ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ.