HomeIndiaBIG NEWS: ಮಹಾ ಕುಂಭಮೇಳದಲ್ಲಿ ತಿರುಪತಿ ವೆಂಕಟೇಶ್ವರ ದೇವಾಲಯ ಪ್ರತಿಕೃತಿ ನಿರ್ಮಾಣ

BIG NEWS: ಮಹಾ ಕುಂಭಮೇಳದಲ್ಲಿ ತಿರುಪತಿ ವೆಂಕಟೇಶ್ವರ ದೇವಾಲಯ ಪ್ರತಿಕೃತಿ ನಿರ್ಮಾಣ

ತಿರುಮಲ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಜನವರಿ 13 ರಿಂದ ಫೆಬ್ರವರಿ 26 ರವರೆಗೆ ಮಹಾಕುಂಭಮೇಳ ನಡೆಯಲಿದೆ.

ಕುಂಭಮೇಳದಲ್ಲಿ ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಪ್ರತಿಕೃತಿ ಮಾದರಿ ಸ್ಥಾಪಿಸಲು ತಿರುಪತಿ ತಿರುಮಲ ದೇವಾಲಯ ಆಡಳಿತ ಮಂಡಳಿ(ಟಿಟಿಡಿ) ನಿರ್ಧರಿಸಿದೆ.

ಈ ಸಂಬಂಧ ಟಿಟಿಡಿ ಆರೋಗ್ಯ ಮತ್ತು ಶಿಕ್ಷಣ ವಿಭಾಗದ ಜೆಇಒ ಗೌತಮಿ ಅವರು ಕುಂಭಮೇಳದ ಪ್ರಾಧಿಕಾರದ ಅಧಿಕಾರಿಗಳನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಕುಂಭಮೇಳದ ಅಧಿಕಾರಿಗಳು ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯದ ಪ್ರತಿಕೃತಿ ನಿರ್ಮಿಸಲು ಆರನೇ ಸೆಕ್ಟರ್ ನಲ್ಲಿ 2.5 ಎಕರೆ ಜಾಗವನ್ನು ಮಂಜೂರು ಮಾಡಿದ್ದಾರೆ. ಕುಂಭಮೇಳದ ಅಧಿಕಾರಿಗಳು ಟಿಟಿಡಿ ಅಧಿಕಾರಿಗಳೊಂದಿಗೆ ತಿರುಮಲ ಮಂದಿರ ನಿರ್ಮಾಣ ಮಾಡಲಿರುವ ಜಾಗವನ್ನು ಪರಿಶೀಲಿಸಿದ್ದು, ಅಗತ್ಯ ವ್ಯವಸ್ಥೆಗಳ ಕುರಿತಾಗಿ ಚರ್ಚೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular