HomeIndiaಮನೆಯಲ್ಲೇ ನೇಣು ಹಾಕಿಕೊಂಡು ಬಿಜೆಪಿ ನಾಯಕಿ ಆತ್ಮಹತ್ಯೆ: ಕೊಲೆ ಶಂಕೆ

ಮನೆಯಲ್ಲೇ ನೇಣು ಹಾಕಿಕೊಂಡು ಬಿಜೆಪಿ ನಾಯಕಿ ಆತ್ಮಹತ್ಯೆ: ಕೊಲೆ ಶಂಕೆ

ಸೂರತ್: ಗುಜರಾತ್ ನ ಸೂರತ್‌ ನಲ್ಲಿ ಬಿಜೆಪಿ ಮಹಿಳಾ ಘಟಕದ ನಾಯಕಿ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಜೆಪಿ ವಾರ್ಡ್ ಮಟ್ಟದ ನಾಯಕಿ ದೀಪಿಕಾ ಪಟೇಲ್ ಸೂರತ್ ನಗರದ ಅಲ್ತಾನ್ ವಾರ್ಡ್ ನಂ.30ರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿದ್ದರು.

34 ವರ್ಷದ ಬಿಜೆಪಿ ಮಹಿಳಾ ನಾಯಕಿ ದೀಪಿಕಾ ಪಟೇಲ್ ಅವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ದೀಪಿಕಾ ಅವರ ಕುಟುಂಬಸ್ಥರು ಆಕೆಯ ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಥಾನ್ ಪೊಲೀಸ್ ಠಾಣಾ ವ್ಯಾಪ್ತಿಯ ಭೀಮ್ರಾಡ್ ಗ್ರಾಮದಲ್ಲಿರುವ ತನ್ನ ಮನೆಯಲ್ಲಿ ಆಕೆ ಸಾವನ್ನಪ್ಪಿದ್ದಾಳೆ.

ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿದೆ. ಬಿಜೆಪಿ ನಾಯಕಿ ದೀಪಿಕಾ ಪಟೇಲ್ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆದರೆ, ಇದೊಂದು ಕೊಲೆ ಎಂದು ಮೃತ ಬಿಜೆಪಿ ಮುಖಂಡನ ಸಂಬಂಧಿಕರು ಆರೋಪಿಸಿದ್ದಾರೆ.

ಈ ಸಂಬಂಧ ತನಿಖೆ ನಡೆಯುತ್ತಿದೆ. ಬಿಜೆಪಿ ನಾಯಕಿ ದೀಪಿಕಾ ಪಟೇಲ್ ಆತ್ಮಹತ್ಯೆ ಮಾಡಿಕೊಂಡಿರುವ ಕಾರಣ ಇನ್ನೂ ತಿಳಿದುಬಂದಿಲ್ಲ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular