ಬೆಂಗಳೂರು: ಆಸ್ತಿ ಮಾಲೀಕರಿಗೆ ಶೀಘ್ರವಾಗಿ ಇ- ಖಾತಾ ವಿತರಣೆಗೆ ಹೆಚ್ಚುವರಿ ಸಹಾಯಕ ಕಂದಾಯ ಅಧಿಕಾರಿಗಳನ್ನು ನಿಯೋಜಿಸುವಂತೆ ಎಲ್ಲಾ 8 ವಲಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಈ ಬಗ್ಗೆ ಮಾಹಿತಿ ನೀಡಿದ್ದು, ಸಹಾಯಕ ಕಂದಾಯ ಅಧಿಕಾರಿಗಳ ಲಾಗಿನ್ ನಲ್ಲಿ ಬಾಕಿ ಇರುವ ಇ- ಖಾತಾ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ವಲಯವಾರು ಹೆಚ್ಚುವರಿ ಸಹಾಯ ಕಂದಾಯ ಅಧಿಕಾರಿಗಳನ್ನು ನಿಯೋಜಿಸಲಿದ್ದು, ಮುಂದಿನ ಒಂದು ವಾರದೊಳಗೆ ಬಾಕಿ ಇರುವ ಎಲ್ಲಾ ಅರ್ಜಿಗಳ ವಿಲೇವಾರಿ ಮಾಡಲು ತಿಳಿಸಲಾಗಿದೆ ಎಂದು ಹೇಳಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರೀಕರ ಸಮಸ್ಯೆ ಆಲಿಸಲು ಎಲ್ಲಾ ವಾರ್ಡ್ ಗಳಲ್ಲಿ ನಿಯೋಜಿಸಿರುವ ನೋಡಲ್ ಅಧಿಕಾರಿಗಳು ಪ್ರತಿ ಬುಧವಾರ ವಾರ್ಡ್ ಕಚೇರಿಗಳಲ್ಲಿ ಕುಂದು ಕೊರತೆ ಸಭೆ ನಡೆಸಲು ತಿಳಿಸಲಾಗಿದೆ. ಪ್ರತಿ ಬುಧವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಂದಾಯ ಮತ್ತು ಕುಂದು ಕೊರತೆಗಳ ಅದಾಲತ್ ನಡೆಸುವಂತೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.