ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಮಂಗಳವಾರ ರಾಜ್ಯದ ವಿವಿಧೆಡೆ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರು ಜಿಲ್ಲೆಗಳಿಗೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಬೆಂಗಳೂರು, ಕೋಲಾರ, ತುಮಕೂರು ಮೊದಲಾದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಉತ್ತರ ಒಳನಾಡಿನ ರಾಯಚೂರು ಸೇರಿ ಅನೇಕ ಜಿಲ್ಲೆಗಳ ಹಲವೆಡೆ ಲಘು ಮಳೆಯಾಗುವ ಸಂಭವ ಇದೆ. ಬೆಂಗಳೂರು, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೋಮವಾರ ಹೆಚ್ಚಿನ ಮಳೆಯಾಗಿದೆ.