alex Certify BIG NEWS: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಅಂಗವಾಗಿ ವರ್ಷವಿಡೀ ‘ಗಾಂಧಿ ಭಾರತ’ ಹೆಸರಲ್ಲಿ ಕಾರ್ಯಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಅಂಗವಾಗಿ ವರ್ಷವಿಡೀ ‘ಗಾಂಧಿ ಭಾರತ’ ಹೆಸರಲ್ಲಿ ಕಾರ್ಯಕ್ರಮ

ಬೆಂಗಳೂರು: 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಆಚರಣೆ ಕುರಿತು ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ಸಭೆ ನಡೆಸಲಾಗಿದೆ.

ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್‌ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು.

ಶತಮಾನೋತ್ಸವ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳನ್ನು ಆರಂಭಿಸಲು ಸೂಚನೆ ನೀಡಲಾಯಿತು.

ಬೆಳಗಾವಿಯಲ್ಲಿ ಡಿ.26ರಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ಮತ್ತು ಡಿ.27ರಂದು ಸಾರ್ವಜನಿಕ ಸಭೆ  ನಡೆಸಲು ನಿರ್ಧರಿಸಲಾಯಿತು.

ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದ ಪ್ರಮುಖ 32 ಕಿಮೀ ಉದ್ದದ ರಸ್ತೆ ಹಾಗೂ 30 ವೃತ್ತಗಳ ದೀಪಾಲಂಕಾರ ಮಾಡಲಾಗುವುದು.

ಕಾಂಗ್ರೆಸ್‌ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ. ಈ ಸ್ಥಳದಲ್ಲಿ ಗ್ರಂಥಾಲಯ ಮತ್ತು ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು.

ಬೆಳಗಾವಿಯ 2.1 ಕಿ.ಮೀ ಉದ್ದದ ಕಾಂಗ್ರೆಸ್‌ ರಸ್ತೆಯಲ್ಲಿ ಶತಮಾನೋತ್ಸವದ ಸ್ಮಾರಕವಾಗಿ ತಾತ್ಕಾಲಿಕ ವಿರೂಪಾಕ್ಷ ಗೋಪುರ ನಿರ್ಮಾಣ, ರೈಲು ಮಾರ್ಗದ ತಡೆಗೋಡೆಯುದ್ದಕ್ಕೂ ಉಬ್ಬು ಶಿಲ್ಪಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಯಿತು.

ಕಣಬರಗಿಯಲ್ಲಿ ಗಂಗಾಧರ ರಾವ್‌ ದೇಶಪಾಂಡೆಯವರ ಸ್ಮಾರಕದಲ್ಲಿ ಮೂರ್ತಿ ಸ್ಥಾಪನೆ, ಮ್ಯೂಸಿಯಂ ಉದ್ಘಾಟನೆ. ಹುದಲಿಯಲ್ಲಿ ಗಾಂಧೀ ಸ್ಮಾರಕ ಹಾಗೂ ಛಾಯಾಚಿತ್ರ ಗ್ಯಾಲರಿಯ ಅಭಿವೃದ್ಧಿ ಮಾಡಲಾಗುವುದು.

ಗಾಂಧೀಜಿ ಅವರು ವಿವಿಧ ಕಾಲಘಟ್ಟಗಳಲ್ಲಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳಲ್ಲಿ ನೆನಪಿನ ಸ್ತಂಭಗಳನ್ನು ನಿರ್ಮಿಸಲು ತೀರ್ಮಾನಿಸಲಾಯಿತು.

ಅಟನ್‌ ಬರೋ ನಿರ್ಮಿಸಿದ ಪ್ರಸಿದ್ಧ ʻಗಾಂಧಿʼ ಸಿನೆಮಾವನ್ನು ಕನ್ನಡದಲ್ಲಿ ನಿರ್ಮಿಸಲು ನಿರ್ಧರಿಸಲಾಯಿತು.

ಸುವರ್ಣ ವಿಧಾನಸೌಧದಲ್ಲಿ ಕಾಂಗ್ರೆಸ್‌ ಅಧಿವೇಶನ, ಸ್ವಾತಂತ್ರ್ಯ ಚಳವಳಿಯನ್ನು ಪ್ರತಿಬಿಂಬಿಸುವ ಛಾಯಾಚಿತ್ರ ಗ್ಯಾಲರಿ ನಿರ್ಮಾಣ ಮಾಡಲಾಗುವುದು.

ಡಿ.26 ರಂದು ಗಣ್ಯ ಪ್ರತಿನಿಧಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಡಿ.27 ರಂದು ಸಾರ್ವಜನಿಕರಿಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.

ಶತಮಾನೋತ್ಸವದ ನೆನಪಿಗೆ ವಿಶೇಷ ಅಂಚೆ ಚೀಟಿ ಬಿಡುಗಡೆಗೆ ನಿರ್ಧಾರ ಮಾಡಲಾಯಿತು.

ವರ್ಷವಿಡೀ ಎಲ್ಲಾ ಶಾಲೆಗಳಲ್ಲಿ ʻಗಾಂಧಿ ಭಾರತʼ ಅಡಿಯಲ್ಲಿ ʻನಾವು ಮನುಜರುʼ ಕಾರ್ಯಕ್ರಮಗಳ ಆಯೋಜನೆ. ಮಕ್ಕಳಲ್ಲಿ ಗಾಂಧೀಜಿ ವಿಚಾರಧಾರೆ ಬಗ್ಗೆ ಅರಿವು ಮೂಡಿಸಲು ವಿವಿಧ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ ಮಾಡಲು ಸೂಚಿಸಲಾಯಿತು.

ಗಾಂಧೀಜಿ ಅವರು ಬೋಧಿಸಿದ ಸಪ್ತ ಪಾತಕಗಳು ಹಾಗೂ ಸಂವಿಧಾನದ ಪೀಠಿಕೆಗಳನ್ನು ಮುದ್ರಿಸಿ ಎಲ್ಲಾ ಶಾಲೆಗಳಲ್ಲಿ ವಿತರಣೆ ಮಾಡಲು ನಿರ್ಧರಿಸಲಾಯಿತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...