ಆಸ್ತಿ ವಿಚಾರಕ್ಕೆ ಸುಪಾರಿ ನೀಡಿ ತಮ್ಮನನ್ನೇ ಪಾಪಿ ಅಣ್ಣ ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗೋಪನಾಳ್ ಗ್ರಾಮದಲ್ಲಿ ನಡೆದಿದೆ.
ಗೋಪನಾಳ್ ಗ್ರಾಮದ ಸಿದ್ದಲಿಂಗಪ್ಪನನ್ನು ಕೊಲೆ ಮಾಡಲು ಅಣ್ಣ ಶಿವಮೋರ್ತಪ್ಪ ಸುಪಾರಿ ನೀಡಿದ್ದನು. ದುಷ್ಕರ್ಮಿಗಳು ಸಿದ್ದಲಿಂಗಪ್ಪನನ್ನು ಟವೆಲ್ ನಿಂದ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾರೆ. ಬಳಿಕ ಕಾಲುವೆಯೊಂದಕ್ಕೆ ಶವ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದರು.
ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಆಸ್ತಿ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಹಲವು ಬಾರಿ ಗಲಾಟೆಯಾಗಿತ್ತು ಎನ್ನಲಾಗಿದೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.