ಫೋನ್ ಖರೀದಿಸಲು 10,000 ರೂಪಾಯಿ ನೀಡಲು ನಿರಾಕರಿಸಿದ ಕಾರಣಕ್ಕೆ 17 ವರ್ಷದ ಬಾಲಕನೊಬ್ಬ ತನ್ನ ತಾಯಿಗೆ ಕತ್ತಿಯಿಂದ ಬೆದರಿಕೆ ಹಾಕಿದ್ದಾನೆ. ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ಭಾನುವಾರ ಸಂಜೆ ಈ ಘಟನೆ ನಡೆದಿದೆ ಎಂದು ಜಾರಿಪಟ್ಕ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದು, ತಾಯಿ ನೀಡಿದ ದೂರಿನಂತೆ ಈಗ ಬಾಲಕನ ವಿರುದ್ದ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಮಹಿಳೆಯು ಕೆಲಸದಿಂದ ಮನೆಗೆ ಹಿಂದಿರುಗಿದಾಗ, ಹುಡುಗ ಫೋನ್ ಖರೀದಿಸಲು 10,000 ರೂ. ಕೇಳಿದ್ದಾನೆ. ಆಗ ಆಕೆ ತನ್ನ ಹದಗೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಉಲ್ಲೇಖಿಸಿ ಹಣ ನೀಡಲು ನಿರಾಕರಿಸಿದ್ದಾರೆ.
ಇದರಿಂದ ಸಿಟ್ಟಿಗೆದ್ದ ಬಾಲಕ ತಾಯಿಯನ್ನು ನಿಂದಿಸಲು ಆರಂಭಿಸಿದ್ದು, ಕತ್ತಿ ಹಿಡಿದು ಬೆದರಿಸಿದ್ದಾನೆ. ನಂತರ ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.