ಬೆಳಗಾವಿ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಡಿಸೆಂಬರ್ 17ರಂದು ಬೆಳಗಾವಿಯ ಸುವರ್ಣಸೌಧದ ಎದುರು ಬೃಹತ್ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.
ಡಿಸೆಂಬರ್ 17, 18 ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಎರಡು ದಿನಗಳ ಕಾಲ ಅಂಗನವಾಡಿ ನೌಕರರಿಂದ ಹೋರಾಟ ನಡೆಯಲಿದೆ. ಬೆಳಗಾವಿಯಲ್ಲಿ ನಡೆಯುವ ಸತ್ಯಾಗ್ರಹದಲ್ಲಿ ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ಅಂಗನವಾಡಿ ನೌಕರರ ಬೇಡಿಕೆ ಈಡೇರಿಸದಿದ್ದಲ್ಲಿ ಫೆಬ್ರವರಿ 24 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಕೈಗೊಂಡು ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.